(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಕೊನೆಗೂ ನ್ಯಾಯಾಲಯಕ್ಕೆ ಸೋಮವಾರದಂದು ಶರಣಾಗಿದ್ದಾನೆ.
ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕನಾಗಿದ್ದ ರಾಜೇಶ್ ಭಟ್ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದು, ಲೈಂಗಿಕ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಆರೋಪಿ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿತ್ತು. ಅಲ್ಲದೇ ಎಲ್ಲಾ ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಿ, ಆರೋಪಿಗೆ ಕೃತ್ಯಕ್ಕೆ ಸಹಕಾರ ನೀಡಿದವರನ್ನು ವಶಕ್ಕೆ ಪಡೆದಿದ್ದರು. ಆದರೂ ಇದುವರೆಗೆ ಆರೋಪಿಯ ಸುಳಿವು ಪತ್ತೆಯಾಗಿರಲಿಲ್ಲ. ಇದರೊಂದಿಗೆ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜಿಲ್ಲಾ ಹಾಗೂ ಹೈಕೋರ್ಟ್ ನಿಂದಲೂ ನಿರಾಕರಣೆಯಾಗಿತ್ತು. ಈ ನಡುವೆ ಜಿಲ್ಲಾ ಮೂರನೇ ಜೆಎಂಎಫ್ ಸಿ ಶರಣಾಗಿದ್ದಾನೆ.