ಮಾಣಿ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಡಿ. 21. ರಿಕ್ಷಾ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.

ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಉಪ್ಪಿನಂಗಡಿ ಕಡೆಯಿಂದ ವೇಗವಾಗಿ ಬಂದ ಬೈಕ್ ಡಿಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಹಾಗೂ ಸಹಸವಾರನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Scroll to Top