ಪಿ.ಎ ಇಂಜಿನಿಯರಿಂಗ್ ಕಾಲೇಜು ಅಧ್ಯಕ್ಷರಾದ ಇಬ್ರಾಹಿಂ ಹಾಜಿ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಪಿಎ ಎಂಜಿನಿಯರಿಂಗ್ ಕಾಲೇಜು ಅಧ್ಯಕ್ಷ ಪಿ.ಎ.ಇಬ್ರಾಹಿಂ ಹಾಜಿಯವರ ಅಗಲುವಿಕೆಯು ಸಮುದಾಯಕ್ಕೆ ಮತ್ತು ನಾಡಿಗೆ ತುಂಬಲಾಗದ ನಷ್ಟವಾಗಿದೆ. ಹಲವಾರು ಸಂಘ ಸಂಸ್ಥೆಗಳಿಗೆ ನೇತೃತ್ವ ವಹಿಸಿದವರು. ಈ ಸೇವೆಗೆ ರಾಷ್ಟ್ರೀಯ ಹಾಗು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಹಾಜಿಯವರು ಹಲವು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೃತರ ಪಾರತ್ರಿಕ ಜೀವನವನ್ನು ಭಗವಂತನು ಯಶಸ್ಸು ಗೊಳಿಸಲಿ.‌ ಕುಟುಂಬ ವರ್ಗ ಮತ್ತು ಹಿತೈಷಿಗಳಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪಾಪ್ಯುಲರ್ ಫ್ರಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಇಜಾಝ್ ಅಹ್ಮದ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Also Read  ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ

 

 

error: Content is protected !!
Scroll to Top