ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,317 ಕೊರೋನಾ ಕೇಸ್ ದೃಢ..! ➤ ಒಮಿಕ್ರಾನ್ ಸೋಂಕಿತರ ಸಂಖ್ಯೆ 213ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 6,317 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಇದರ ಪೈಕಿ 318 ಮಂದಿ ಮೃತರಾಗಿದ್ದಾರೆ. ಅಲ್ಲದೇ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರದಂದು ಬಿಡುಗಡೆ ಮಾಡಿದ ಅಂಕಿಅಂಶದಲ್ಲಿ ತಿಳಿಸಿದೆ.


24 ಗಂಟೆಗಳ ಅವಧಿಯಲ್ಲಿ ಕೊರೋನಾ ಸೋಂಕಿನಿಂದ 6,906 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213ಕ್ಕೆ ಏರಿಕೆಯಾಗಿದ್ದು, ಈವರೆಗೆ ಒಮಿಕ್ರಾನ್ ಸೋಂಕಿತ 90 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ಇಲಾಖೆ ತಿಳಿಸಿದೆ.

Scroll to Top