ಅದ್ದೂರಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿ‌ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕೊರೋನಾ ಸೋಂಕಿನ ಆತಂಕದ ಹಿನ್ನೆಲೆ ರಾಜ್ಯದಲ್ಲಿ ಅದ್ದೂರಿಯ ಕ್ರಿಸ್ ಮಸ್ ಆಚರಣೆ ಹಾಗೂ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.


ರೂಪಾಂತರಿ ತಳಿ ಒಮಿಕ್ರಾನ್ ಹಿನ್ನೆಲೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ವಿಚಾರಕ್ಕೆ ಸಂಬಂಧಿಸಿ ದೊಡ್ಡ ನಿರ್ಧಾರ ಕೈಗೊಂಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆಯನ್ನು ಅದ್ದೂರಿಯಾಗಿ ಆಚರಿಸುವುದಕ್ಕೆ ಬ್ರೇಕ್ ಹಾಕಿದ್ದಲ್ಲದೇ ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು ಹಾಗೂ ಆಟದ ಮೈದಾನದಲ್ಲಿ ಸಂಭ್ರಮಾಚರಣೆಗೆ ನಿಷೇಧ ಹೇರಿದೆ. ಈ ಕುರಿತು ಆದೇಶ ಹೊರಡಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.

Also Read  ಚಿರತೆಯ ಬೆನ್ನಲ್ಲೇ ಕಾಡುಕೋಣಗಳ ಹಾವಳಿ...! ➤ ಪುತ್ತೂರಿನಲ್ಲಿ ಗದ್ದೆಗೆ ದಾಳಿ ಮಾಡಿ ಅಪಾರ ಪೈರು ನಾಶಮಾಡಿದ ಕಾಡುಕೋಣ

 

 ಹೊಸ ವರ್ಷಾಚರಣೆಗೆ ಮಾರ್ಗಸೂಚಿ

1) ಕ್ಲಬ್ ಗಳು/ಪಬ್ ಗಳು. ರೆಸ್ಟೋರೆಂಟ್ ಗಳು/ಹೋಟೆಲ್ ಗಳು/ಉದ್ಯಾನವನಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ / ಅರ್ಕೇಸ್ಟ್ರಾ / ಸಮೂಹ ನೃತ್ಯ ಕಾರ್ಯಕ್ರಮಗಳಿಗೆ ಬ್ರೇಕ್.

2) ಹೊಸ ವರ್ಷವನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು, ಉದ್ಯಾನವನಗಳು, ಆಟದ ಮೈದಾನಗಳು ಇತ್ಯಾದಿಗಳನ್ನು ಬಳಸುವಂತಿಲ.

3) ರೆಸ್ಟೋರೆಂಟ್ ಹಾಗೂ ಪಬ್ ಸಿಬ್ಬಂದಿಗಳು ಮತ್ತು ಅಲ್ಲಿಗೆ ಭೇಟಿ ನೀಡುವ ಸಾರ್ವಜನಿಕರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು

6) ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Also Read  ಜೀವನದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ ಈ ವಿಧಾನವನ್ನು ಅನುಸರಿಸಿ

 

 

error: Content is protected !!
Scroll to Top