ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ➤ 2 ಕರುಗಳ ರಕ್ಷಣೆ, ಚಾಲಕ ಪರಾರಿ..!



(ನ್ಯೂಸ್ ಕಡಬ) newskadaba.com ಬೈಂದೂರು, ಡಿ. 22. ಅಕ್ರಮ ಜಾನುವಾರು ಸಾಗಾಟವನ್ನು ತಡೆದ ಪೊಲೀಸರು ಹಿಂಸಾತ್ಮಕವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಕರುಗಳನ್ನು ರಕ್ಷಿಸಿದ ಘಟನೆ ಯಡ್ತರೆ ಜಂಕ್ಷನ್ ಬಳಿ ನಡೆದಿದೆ.







ಎರಡು ಕರುಗಳನ್ನು ಕಳವುಗೈದು ಕಾರಿನಲ್ಲಿ ತುಂಬಿಸಿಕೊಂಡು ಕಿರಿಮಂಜೇಶ್ವರದಿಂದ ಬೈಂದೂರು ಕಡೆಗೆ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಬೈಂದೂರು ಪೊಲೀಸರು ಯಡ್ತರೆ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದು, ಈ ವೇಳೆ ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಅತೀ ವೇಗವಾಗಿ ಬರುತ್ತಿದ್ದ ಕಾರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಈ ಸಂದರ್ಭ ಚಾಲಕನು ಕಾರನ್ನು ಯಡ್ತರೆ ಜಂಕ್ಷನ್ ನಿಂದ ಸ್ವಲ್ಪ ಹಿಂದೆಯೇ ನಿಲ್ಲಿಸಿ, ಆರೋಪಿಗಳು ಪರಾರಿಯಾಗಿದ್ದಾರೆ. ಕಾರನ್ನು ಪೊಲೀಸರು ತಪಾಸಣೆ ನಡೆಸಿದಾಗ ಕಾರಿನಲ್ಲಿ ಎರಡು ಕರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡುಬಂದಿದೆ. ಸದ್ಯ 2 ಕರುಗಳನ್ನು ರಕ್ಷಿಸಲಾಗಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






\

error: Content is protected !!
Scroll to Top