ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್ ಢಿಕ್ಕಿ – ಗಾಯ



(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 22. ಪಾದಚಾರಿ ಮಹಿಳೆಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಅಡ್ಕಾರು ಎಂಬಲ್ಲಿ ಬುಧವಾರದಂದು ನಡೆದಿದೆ.







ಗಾಯಾಳು ಮಹಿಳೆಯನ್ನು ಅಡ್ಕಾರು ನಿವಾಸಿ ಶಕುಂತಲಾ ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ ಮೀಟಿಂಗ್ ಒಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದಿದೆ. ತಕ್ಷಣವೇ ಅವರನ್ನು ಸ್ಥಳೀಯರು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

error: Content is protected !!
Scroll to Top