(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26. ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಡಿ.28ರಿಂದ ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯಾದ್ಯಂತ ಡಿ.28 ರಿಂದ 10 ದಿನಗಳವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಸಭೆ ಸಮಾರಂಭಗಳಲ್ಲಿ ಶೇ. 50ರಷ್ಟು ಮಂದಿಗೆ ಭಾಗವಹಿಸಲು ಮಾತ್ರ ಅವಕಾಶ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸವರ್ಷ ಆಚರಿಸುವಂತಿಲ್ಲ ಎಂದವರು ತಿಳಿಸಿದ್ದಾರೆ.
Also Read ಮರ್ಧಾಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ➤ ಹಿಂದಿನ ಕ್ರಿಯಾ ಯೋಜನೆ ರದ್ದುಮಾಡಿ ಹೊಸ ಯೋಜನೆ ತಯಾರಿಗೆ ಆಗ್ರಹ