ಕಂಬಳ ತಡೆಯಾಜ್ಞೆ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ.06. ಕರಾವಳಿಯ ಜನಪದ ಕ್ರೀಡೆ ಕಂಬಳಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಕಂಬಳ ಕ್ರೀಡೆಗೆ ತಡೆಯಾಜ್ಞೆ ನೀಡುವಂತೆ ಪೆಟಾ(ಪಿಇಟಿಎ) ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಕಂಬಳಕ್ಕೆ ತಡೆಯಾಜ್ಞೆ ನೀಡುವ ಮನವಿಯನ್ನು ತಿರಸ್ಕರಿಸಿದೆ. ಮುಂದಿನ ವಿಚಾರಣೆಯನ್ನು ನ.13ಕ್ಕೆ ನಿಗದಿಪಡಿಸಿದೆ.

ಈ ಸಂಬಂಧ ಕೇಂದ್ರ ಸರಕಾರ, ಕರ್ನಾಟಕ ಸರಕಾರಕ್ಕೆ ನೋಟಿಸು ನೀಡಿದ್ದು, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಅಟಾರ್ನಿ ಜನರಲ್ ಗೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಸೂಚಿಸಿದೆ.

Also Read  3ನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ.!! ➤ ಎಚ್‌ ಡಿ.ಕುಮಾರಸ್ವಾಮಿ

error: Content is protected !!
Scroll to Top