(ನ್ಯೂಸ್ ಕಡಬ) newskadaba.com ಕಡಬ, ಡಿ.29: ಚೂರಿ ಇರಿತಕ್ಕೆ ಒಳಗಾಗಿ ರಬ್ಬರ್ ಟ್ಯಾಪರ್ ತೀವ್ರ ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ಕಡಬ ಸಮೀಪದ ಮರ್ದಾಳದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಗಾಯಗೊಂಡ ವ್ಯಕ್ತಿಯನ್ನು ಕೇರಳ ಮೂಲದ ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂದು ಗುರುತಿಸಲಾಗಿದೆ. ಪ್ರಸಾದ್ ಅವರಿಗೆ ಸ್ಥಳೀಯ ಇನ್ನೋರ್ವ ರಬ್ಬರ್ ಟ್ಯಾಪರ್ ಶಿವಪ್ರಸಾದ್ ಅವರು ಚೂರಿಯಿಂದ ತಿವಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿ ಶಿವಪ್ರಸಾದ್ ಅವರನ್ನು ಕಡಬ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.