ಗುಂಡ್ಯ: ಟೆಂಪೋ ಟ್ರಾವೆಲರ್ – ಬ್ರೆಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ಐವರು ಗಂಭೀರ, ಹಲವರಿಗೆ ಗಾಯ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.31. ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬ್ರೆಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.







ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ತಮಿಳುನಾಡು ಮೂಲದವರಿದ್ದ ಬ್ರೆಝಾ ಕಾರು ನಡುವೆ ಗುಂಡ್ಯ ಸಮೀಪದ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಟ್ರಾವೆಲ್ಲರ್ ನಲ್ಲಿದ್ದ ಒಟ್ಟು ಐವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ 108 ಅಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.






 

error: Content is protected !!
Scroll to Top