ಗುಂಡ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಮರ ➤ ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.02. ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆಯಲ್ಲಿ ಭಾನುವಾರದಂದು ನಡೆದಿದೆ.

ಉಡುಪಿ ಮೂಲದ ಕುಟುಂಬವೊಂದು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆರೆಯುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿದ್ದ ಹಾಲುಮಡ್ಡಿ ಮರ ಬಿದ್ದು ಈ ದುರ್ಘಟನೆ ಸಂಭವಿಸಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Also Read  ಶಾಲೆಗೆ ಮಕ್ಕಳ ಮರುದಾಖಲಾತಿ ಕಡ್ಡಾಯ ➤ಶಿಕ್ಷಣ ಸಚಿವ ಸುರೇಶ್ ಕುಮಾರ್

 

error: Content is protected !!
Scroll to Top