ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ.07. ಸಿಡಿಲು ಬಡಿದು ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ಘಟನೆ ತಾಲೂಕಿನ ಆರ್ಯಾಪು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೃತ ಕೂಲಿ ಕಾರ್ಮಿಕನನ್ನು ಆರ್ಯಾಪು ನಿವಾಸಿ ಸುಂದರ (54) ಎಂದು ಗುರುತಿಸಲಾಗಿದೆ. ಸುಂದರ ಅವರು ಸಿಡಿಲು ಬರುತ್ತಿದ್ದ ವೇಳೆ ತನ್ನ ಮನೆಯಲ್ಲಿದ್ದರು ಎನ್ನಲಾಗಿದ್ದು, ಈ ವೇಳೆ ಸಿಡಿಲಿನ ಆಘಾತಕ್ಕೆ ಒಳಗಾಗಿ ಮೃತಪಟ್ಟರು ಎಂದು ತಿಳಿದುಬಂದಿದೆ. ಇವರು ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದು, ಹವ್ಯಾಸಿ ನಾಟಕಗಾರನಾಗಿ ಹಲವು ತುಳು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದರು.

Also Read  ಪಾಣೆಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top