ಅಪ್ರಾಪ್ತ ಬಾಲಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಅಪ್ರಾಪ್ತ ಬಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಡಿಸೋಜ ಎಂದು ಗುರುತಿಸಲಾಗಿದೆ. ಈತ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದು, ಶಾಲೆಗೆ ಸರಿಯಾಗಿ ಹೋಗುತ್ತಿರಲಿಲ್ಲ ಎನ್ನಲಾಗಿದೆ. ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತನನ್ನು ಬೆಳಗ್ಗೆ ಮನೆಯವರು ಎದ್ದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

error: Content is protected !!
Scroll to Top