ಸುಳ್ಯ: ಅಬಕಾರಿ ಇಲಾಖೆಯ ಅಧಿಕಾರಿಗಳ ಯಶಸ್ವಿ ಕಾರ್ಯಾಚರಣೆ ➤ ಹಾಸ್ಟೆಲ್ ನಲ್ಲಿ ಸಂಗ್ರಹಿಸಿಡಲಾಗಿದ್ದ 11 ಕೆ.ಜಿ ಗಾಂಜಾ ವಶಕ್ಕೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 04. ಸುಳ್ಯ ಹಾಗೂ ಪುತ್ತೂರು ಅಬಕಾರಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ತಾಲೂಕಿನ ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆಜಿ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.


ಬೆನಕ್ ಹಾಸ್ಟೆಲ್ ನ ಕೊಠಡಿಯೊಂದನ್ನು ಬಾಡಿಗೆಗೆ ಪಡೆದ ಪಲ್ಲತ್ತೂರಿನ ಮೊಯ್ದಿನ್ ಕುಂಞಿ ಎಂಬವರು ತನ್ನ ಕುಟುಂಬದೊಂದಿಗೆ ವಾಸವಾಗಿದ್ದು, ಇಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ತಪಾಸಣೆಯ ಸಂದರ್ಭ 11.5 ಕೆಜಿ ಗಾಂಜಾ ಪತ್ತೆಯಾಗಿದ್ದು, ಇದೇ ವೇಳೆ ಆರೋಪಿ ಮೊಯ್ದಿನ್ ಕುಂಞಿ ಪರಾರಿಯಾಗಿದ್ದು, ಸಲಾಹುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಮೊಯ್ದಿನ್ ಕುಂಞಿಯವರ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲೂ ಒಂದು ಕೆಜಿ ಗಾಂಜಾ ಪತ್ತೆಯಾಗಿದೆ ಎನ್ನಲಾಗಿದೆ.

Also Read  ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ನವ ವಿವಾಹಿತೆ ಹತ್ಯೆ!

 

error: Content is protected !!
Scroll to Top