ಕೊರೋನಾ ತಡೆಗೆ ಸರಕಾರದಿಂದ ಮಹತ್ವದ ತೀರ್ಮಾನ ➤ ಎರಡು ವಾರಗಳ ಕಾಲ ಶಾಲಾ ಕಾಲೇಜುಗಳು ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.04. ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೆ ಹೆಚ್ಚುತ್ತಿರುವ ನಡುವೆಯೇ ಬೆಂಗಳೂರಿನಲ್ಲಿ ಎರಡು ವಾರಗಳ ಕಾಲ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಸರಕಾರವು ಆದೇಶ ಹೊರಡಿಸಿದೆ.

ಈ ಬಗ್ಗೆ ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿರುವ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಜಾರಿಗೊಳಿಸಲಾಗಿದ್ದು, ನೈಟ್ ಕರ್ಫ್ಯೂವನ್ನು ಮುಂದುವರಿಸಲಾಗಿದೆ‌. ಬೆಂಗಳೂರು ನಗರದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಹೊರತುಪಡಿಸಿ ಶಾಲಾ ಕಾಲೇಜುಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

Also Read  ಕೊರೋನಾ ಭೀತಿಯಿಂದ ಆತ್ಮಹತ್ಯೆಗೈದ ದಂಪತಿಯ ವರದಿ ನೆಗೆಟಿವ್

 

 

error: Content is protected !!
Scroll to Top