ಅಕ್ರಮ ಮರಳು ಸಾಗಾಟ ತಡೆಗಟ್ಟಲು ನಿಗ್ರಹ ದಳ ಸ್ಥಾಪನೆ ➤ ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ನಿಗ್ರಹ ದಳದ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ. ಈ ದಳದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಮಾಜಿ ಸೈನಿಕರು 2022ರ ಜ.10ರ ಸೋಮವಾರ ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top