(ನ್ಯೂಸ್ ಕಡಬ) newskadaba.com ವಿಟ್ಲ, ಜ. 05. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿಟ್ಲದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ಯುವಕನನ್ನು ಪುಣಚ ನಿವಾಸಿ ಪ್ರದೀಪ್ ಕುಲಾಲ್ (25) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತ ಬುಧವಾರದಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಪುತ್ತೂರಿನಲ್ಲಿ ಪದವಿ ಶಿಕ್ಷಣ ಮುಗಿಸಿ ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಶುರೆನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.














