ಸುಳ್ಯ: ಕೆಲಸಕ್ಕೆ ತೆರಳಿದ್ದ ಯುವಕನ ಮೇಲೆ ಕಾಡಾನೆ ದಾಳಿ- ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಜ. 05. ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೋರ್ವ ಕಾಡಾನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಪೆರಾಜೆ ನಿವಾಸಿ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಮದೆ ಗ್ರಾಮದಲ್ಲಿನ ತೋಟವೊಂದಕ್ಕೆ ಕೆಲಸದ ನಿಮಿತ್ತ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top