ಕಡಬ: ವಿಕಲಚೇತನರ ವೈದ್ಯಕೀಯ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಜ. 06. ಇಲ್ಲಿನ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ವಿಕಲಚೇತನರ ವೈದ್ಯಕೀಯ ಶಿಬಿರವು ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್‌ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭ ಸುಳ್ಯ ಸರಕಾರಿ ಆಸ್ಪತ್ರೆಯ ಎಲುಬು ತಜ್ಞ ಪದ್ಮನಾಭ ಎನ್., ಕಣ್ಣಿನ ತಜ್ಞೆ ಅರ್ಚನಾ, ಪುತ್ತೂರು ಸರಕಾರಿ ಆಸ್ಪತ್ರೆಯ ಇ.ಎನ್.ಟಿ ತಜ್ಞ ಯೈನಬ್ ಸುನು ಅಲಿರವರು ತಪಾಸಣೆ ನಡೆಸಿ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿದರು. ಇದೇ ವೇಳೆ ಶಿಬಿರ ನಡೆಯಲು ಸಹಕರಿಸಿದ ಜಿ.ಪಂ.ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಡಬ ತಾಲೂಕಿನ ವಿವಿಧ ಗ್ರಾಮಗಳಿಂದ ವಿಕಲಚೇತನ ಫಲಾನುಭವಿಗಳು ಶಿಬಿರಕ್ಕೆ ಆಗಮಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ತಾಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಪಾಲ್ಗೊಂಡು ಶಿಬಿರದ ಯಶಸ್ವಿಗೆ ಸಹಕರಿಸಿದರು.

Also Read  ಹನಿಟ್ರ್ಯಾಪ್ ಶಂಕೆ ➤‌ ಮಹಿಳೆಯ ವಿರುದ್ದ ದೂರು ದಾಖಲು

 

error: Content is protected !!
Scroll to Top