(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 06. ದೇಶದಾದ್ಯಂತ ಹರಡುತ್ತಿರುವ ಕೊರೋನಾ ರೂಪಾಂತರಿ ತಳಿ ಒಮಿಕ್ರಾನ್ ವೈರಸ್ ಅನ್ನು ತಡೆಗಟ್ಟುವ ಹಿನ್ನೆಲೆ ಪ್ರಸಿದ್ದ ದೇವಸ್ಥಾನ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ದ.ಕ ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಜ. 06ರಿಂದ ಮುಂದಿನ ಆದೇಶದವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಎರಡು ಡೋಸ್ ಪಡೆದ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರುವುದಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.
ಒಂದು ಬಾರಿಗೆ 50 ಮಂದಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ಶುಕ್ರವಾರ ರಾತ್ರಿ ಎಂಟರಿಂದ ಸೋಮವಾರ ಬೆಳಗ್ಗೆ ಐದರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ. ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಕಡ್ಡಾಯ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡುವುದು ಮೊದಲಾದ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದೇವರ ದರ್ಶನ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.