ಮಂಗಳೂರು: ಎರಡುಪ್ರತ್ಯೇಕ ಪ್ರಕರಣ ➤ ಪಿಎಸ್ಐ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಗಳ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯಲೋಪ ಎಸಗಿದ ಮಹಿಳಾ ಎಸ್ಐ ಸೇರಿದಂತೆ ಆರು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಫೋಕ್ಸೋ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ ಮಹಿಳಾ ಪೊಲೀಸ್ ಠಾಣಾ ಪಿಎಸ್ಐ ರೋಸಮ್ಮ ಎಂಬವರನ್ನು ಅಮಾನತುಗೊಳಿಸಿ, ಬಳಿಕ ಪ್ರಕರಣದ ಆರೋಪಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ನನ್ನು ಬಂಧಿಸಲಾಯಿತು. ಹಾಗೆಯೇ ಮತ್ತೊಂದು ಕಡೆ ಪೊಲೀಸ್ ಠಾಣೆಯಲ್ಲಿ ಮದ್ಯದ ಪಾರ್ಟಿ ಮಾಡಿದ್ದಾರೆ ಎಂಬ ಕಾರಣಕ್ಕೆ ಮಹಿಳಾ ಠಾಣೆಯ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

 

 

Scroll to Top