ಕರಾವಳಿ ಜಿಲ್ಲೆಯಲ್ಲಿ ಕೊರೋನಾ ಮೂರನೇ ಅಲೆಯ ಭೀತಿ ಹಿನ್ನೆಲೆ ➤ ಜಿಲ್ಲಾಧಿಕಾರಿಯಿಂದ ಕೇರಳ ಗಡಿ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಕೇರಳ ಗಡಿಭಾಗ ತಲಪಾಡಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಕೇರಳದಿಂದ ಬರುವ ಎಲ್ಲಾ ವಾಹನಗಳ ಪರಿಶೀಲನೆ ನಡೆಸುವಂತೆ ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಜಿಲ್ಲೆಗೆ ಆಗಮಿಸುವ ಎಲ್ಲರಲ್ಲೂ ಆರ್ಟಿಪಿಸಿಆರ್ ಕಡ್ಡಾಯವಾಗಿ ಇರಬೇಕು. ಈ ವಿಚಾರವಾಗಿ ಅಧಿಕಾರಿಗಳು ಪ್ರತಿದಿನ 24 ಗಂಟೆಗಳ ಕಾಲ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಪೊಲೀಸ್ ಇಲಾಖೆ ಸಹಿತ ಆರೋಗ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಕಾನೂನು ನಿಯಮ ಉಲ್ಲಂಘನೆ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

Also Read  ನವರಾತ್ರಿ ಉತ್ಸವಕ್ಕಾಗಿ ಅಳವಡಿಸಿದ ವಿದ್ಯುತ್ ಕೇಬಲ್ ತಗುಲಿ ಬಾಲಕ ಮೃತ್ಯು

error: Content is protected !!
Scroll to Top