ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ➤ ಬಿಇ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬಿಇ ವಿದ್ಯಾರ್ಥಿನಿಯೋರ್ವಳು ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಮೃತ ವಿದ್ಯಾರ್ಥಿನಿಯನ್ನು ಆರ್.ಎಸ್.ಪಾಳ್ಯ ನಿವಾಸಿ ಸಂಜನಾ ಪ್ರಿಯಾ ಎಂದು ಗುರುತಿಸಲಾಗಿದೆ. ಗಾಯಗೊಂಡ ಸವಾರನನ್ನು ವಿನಯ್ ಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹಿಂದುಗಡೆಯಿಂದ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ವಿದ್ಯಾರ್ಥಿನಿಯ ತಲೆಯ ಮೇಲೆ ಟಿಪ್ಪರ್ ನ ಚಕ್ರ ಹರಿದು ಈ ದುರ್ಘಟನೆ ನಡೆದಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top