ಜ. 10ರಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ➤ ಸಚಿವ ಸುಧಾಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. 60 ವರ್ಷ ಮೇಲ್ಪಟ್ಟವರು, ಕೊರೋನಾ ವಾರಿಯರ್ಸ್‌ ಹಾಗೂ ಆರೋಗ್ಯ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಜ.10ರಿಂದ ಮೂರನೇ ಹಂತದ ಲಸಿಕೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಆರೋಗ್ಯ ಹಾಗೂ ವ್ಯದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರುವ ಹಿರಿಯ ನಾಗರೀಕರು, ಆರೋಗ್ಯ ಸೇವೆಯಲ್ಲಿ ನಿರತ ವೈದ್ಯರು, ದಾದಿಯರು ಹಾಗೂ ಫ್ರಂಟ್ ಲೈನ್ ವಾರಿಯರ್ಸ್ ಬೂಸ್ಟರ್ ಡೋಸ್ ನೀಡಲಾಗುವುದು ಎಂದಿದ್ದಾರೆ. ಸರಕಾರವು ಯಾವುದೇ ದುರುದ್ದೇಶದಿಂದ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿಲ್ಲ, ಸೋಂಕು‌ ಹೆಚ್ಚುತ್ತಿರುವ ಹಿನ್ನೆಲೆ ನಿಯಂತ್ರಿಸಲು ಜಾರಿಗೆ ತರಲಾಗಿದೆ. ಹೀಗಾಗಿ ರಾಜಕೀಯ ಪಕ್ಷಗಳ ನೇತಾರರು, ಸಂಘಸಂಸ್ಥೆಗಳ ನೇತಾರರು ಸರಕಾರದೊಂದಿಗೆ ಸಹಕರಿಸಬೇಕು. ಆರೋಗ್ಯ ತುರ್ತು ಪರಿಸ್ಥಿತಿಯ ವೇಳೆ ಅರ್ಥ ಮಾಡಿಕೊಂಡು ರೋಗ ಹರಡುವಿಕೆ ತಡೆಯಲು ಸಹಕಾರ ನೀಡಬೇಕು ಎಂದರು.

Also Read  ಕಳಾರ ತಡೆಗೋಡೆಗೆ ಗುದ್ದಲಿಪುಜೆ

error: Content is protected !!
Scroll to Top