ಮಂಗಳೂರು: ಆರು ತಿಂಗಳಿನಿಂದ ಸಿಗದ ವೇತನ ➤ ಏಕಾಂಗಿ ಧರಣಿ ಕುಳಿತ ವೈದ್ಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಆರು ತಿಂಗಳ ವೇತನ ತಡೆಹಿಡಿದಿರುವುದನ್ನು ವಿರೋಧಿಸಿ, ನಾಟೇಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಯೋಗಾಲಯದ ಕಿರಿಯ ತಾಂತ್ರಿಕ ಅಧಿಕಾರಿ ಜಲೀಲ್ ಇಬ್ರಾಹಿಂ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಗುರುವಾರ ಬೆಳಗ್ಗೆಯಿಂದ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಕಳೆದ ಇಪ್ಪತ್ತೆರಡು ವರ್ಷಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಜಲೀಲ್ ಇಬ್ರಾಹಿಂ ಅವರ ವೇತನವನ್ನು ಹೊಸದಾಗಿ ನೇಮಕಗೊಂಡ ವೈದ್ಯಾಧಿಕಾರಿಗಳು ಸಣ್ಣಪುಟ್ಟ ಕಾರಣಗಳಿಂದಾಗಿ ತಡೆಹಿಡಿದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯುಕ್ತರು ಸಹಿತ ಹಲವು ಅಧಿಕಾರಿಗಳು ವೇತನ ಬಿಡುಗಡೆ ಮಾಡುವಂತೆ ಎಷ್ಟೇ ಹೇಳಿದರೂ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಅನಗತ್ಯ ಕಿರುಕುಳ ನೀಡುತ್ತಿದ್ದು, ಇದರಿಂದ ಕುಟುಂಬ ನಿರ್ವಹಣೆಗೆ ಕಷ್ಟವಾಗುತ್ತಿದೆ, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.

Also Read  ಕಡಬ: ನಿದ್ದೆಯ ಮಂಪರಿನಲ್ಲಿ ವಾಣಿಜ್ಯ ಕಟ್ಟಡಕ್ಕೆ ಢಿಕ್ಕಿ ಹೊಡೆದ ಕಾರು ► ಮೂವರು ಅಪಾಯದಿಂದ ಪಾರು

error: Content is protected !!
Scroll to Top