ದ.ಕ, ಉಡುಪಿ ಜಿಲ್ಲೆಯಲ್ಲಿ ಬೆಳೆಯುವ ಕುಚ್ಚಲಕ್ಕಿಯನ್ನು ಪಡಿತರ ಚೀಟಿದಾರರಿಗೆ ವಿತರಿಸಲು ಕೇಂದ್ರ ಚಿಂತನೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ಉಡುಪಿ, ದ.ಕ ಜಿಲ್ಲೆಗಳಲ್ಲಿ ಬೆಳೆಯುವ ಕುಚ್ಚಲಕ್ಕಿಯನ್ನು ಪಡಿತರ ಕೇಂದ್ರಗಳಲ್ಲಿ ಪಡಿತರ ಚೀಟಿದಾರರಿಗೆ ವಿತರಿಸುವ ಕುರಿತು ಸರಕಾರ ನಿರ್ಧರಿಸಿದೆ.


ಈ ಕುರಿತು ಟ್ವೀಟ್ ಮಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪಡಿತರ ಕೇಂದ್ರದಲ್ಲಿ ವಿತರಿಸಲು ಉಡುಪಿ, ದ.ಕ ಜಿಲ್ಲೆಗಳಲ್ಲಿ ಬೆಳೆದ ಕುಚ್ಚಲಕ್ಕಿಯನ್ನು ನೀಡಲು ಸಮ್ಮತಿಸಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಧನ್ಯವಾದಗಳು. ಸ್ಥಳೀಯ ಉತ್ಪನ್ನಗಳಿಗೆ ಬೆಂಬಲ ನೀಡುವ ಜೊತೆಗೆ ಫಲಾನುಭವಿಗಳಿಗೆ ಅವರ ಆಯ್ಕೆಯ ಆಹಾರ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ತಿಳಿಸಿದ್ದಾರೆ.

Also Read   ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ - `ಯುವನಿಧಿ' ಜಾರಿ ಬಗ್ಗೆ ಸಿಎಂ ಸ್ಪಷ್ಟನೆ

error: Content is protected !!
Scroll to Top