ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ➤ ಖಿದ್ಮಾ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. “ಚಂಪಾ” ಎಂದೇ ಜನಪ್ರಸ್ಥಿರಾಗಿದ್ದ ಕನ್ನಡದ ಹಿರಿಯ ಸಾಹಿತಿ, ನಾಟಕಕಾರರು ಆದ ಪ್ರೊ: ಚಂದ್ರಶೇಖರ ಪಾಟೀಲ ಅವರ ನಿಧನ ತುಂಬಾ ನೋವು ತಂದಿದೆ. ಅವರೊಬ್ಬ ಭಾರತೀಯ ಕವಿ, ನಾಟಕಕಾರರು ಹಾಗೂ ಬಂಡಾಯ ಚಳವಳಿಯ ಪ್ರಮುಖ ಧ್ವನಿಗಳಲ್ಲಿ ಒಬ್ಬರಾಗಿದ್ದರು.

ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂದ್ರಶೇಖರ ಪಾಟೀಲರು, ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ, ಸಾಹಿತ್ಯ ಲೋಕಕ್ಕೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು ಹೇಳಿದರು. ಈ ಮೂಲಕ ಅವರ ನಿಧನಕ್ಕೆ ಖಿದ್ಮಾ ಫೌಂಡೇಶನ್ ಕರ್ನಾಟಕದ ಸಂತಾಪ ಸೂಚಿಸಿದ್ದಾರೆ.

Also Read  ಕುಪ್ಪೆಪದವು ಬದ್ರಿಯಾ ಜುಮಾ ಮಸ್ಜಿದ್ ವಾರ್ಷಿಕ ಮಹಾಸಭೆ ➤ 2023- 2024 ಸಾಲಿನ ನೂತನ ಅಧ್ಯಕ್ಷರಾಗಿ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಆಯ್ಕೆ

error: Content is protected !!
Scroll to Top