ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವನ್ನು ಲೆಕ್ಕಿಸದೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೊರೋನಾ ಪ್ರಕರಣ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಸಾಧ್ಯತೆ ಇದ್ದು, ಹೀಗಾದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.


ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾದರೂ ಕೊರೋನಾ ಪ್ರಕರಣ ಹೆಚ್ಚಾದರೆ ತಿಂಗಳುಗಳ ಕಾಲ ಲಾಕ್ ಡೌನ್ ಮಾಡಬೇಕಾಗುತ್ತದೆ. ಮತ್ತೆ ಹೀಗೆ ಆದಲ್ಲಿ ಅದಕ್ಕೆ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನೇರ ಹೊಣೆಯಾಗಲಿದೆ ಎಂದರು.

Also Read  ಮೇಕೆ ಹಾಲು ಹಸುವಿನ ಹಾಲಿಗಿಂತ ಉತ್ತಮ ಯಾಕೆ? ಮೇಕೆ ಹಾಲಿನ ಔಷಧೀಯ ಗುಣಗಳೇನು..ಇಲ್ಲಿದೆ ನೋಡಿ

 

error: Content is protected !!
Scroll to Top