ಮಂಗಳೂರು: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ➤ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ವಿದ್ಯಾಭ್ಯಾಸ, ಉದ್ಯೋಗ ಹಾಗೂ ಇನ್ನಿತರ ಕಾರಣಗಳಿಂದ ವಿದೇಶದಲ್ಲಿ ನೆಲೆಸಿರುವ ವ್ಯಕ್ತಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡಿಸಲು ಅವಕಾಶ ನೀಡಲಾಗಿದೆ.

ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಲು ತಮ್ಮ ಪಾಸ್‌ಪೋರ್ಟ್‌‌‌‌ ಜೆರಾಕ್ಸ್, ವೀಸಾ ಜೆರಾಕ್ಸ್ ಹಾಗೂ ಒಂದು ಭಾವಚಿತ್ರದೊಂದಿಗೆ ಫಾರ್ಮ್-6ಎ ಯನ್ನು ವೋಟರ್ ಹೆಲ್ಪ್ ಲೈನ್ ಆ್ಯಪ್ ಅಥವಾ www.nvsp.in ವೆಬ್‍ಸೈಟ್ ಮೂಲಕ ನೋಂದಣಿ ಮಾಡಬಹುದಾಗಿದೆ. ಎನ್. ಆರ್. ಐ ವೋಟರ್ಸ್ ಮತದಾರರ ಪಟ್ಟಿಗೆ ಸೇರ್ಪಡೆ ಬಯಸಿ ನಮೂನೆ-6ಎ ಯಲ್ಲಿ ಅರ್ಜಿ ಸಲ್ಲಿಸುವಾಗ ಆ ಸದಸ್ಯರ ಹೆಸರು ಸಾಮಾನ್ಯ ಮತದಾರರ ಪಟ್ಟಿಯಲ್ಲಿ ಸೇರಿರಬಾರದು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ಬದಲಾವಣೆ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಉಚಿತ ಸಹಾಯವಾಣಿ ಸಂಖ್ಯೆ 1950 ಮೂಲಕ ಕರೆಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Also Read  ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

 

error: Content is protected !!
Scroll to Top