(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ಹೆತ್ತ ತಾಯಿಯನ್ನೇ ಪಾಪಿ ಪುತ್ರನೋರ್ವ ಅಮಾನುಷವಾಗಿ ಅತ್ಯಾಚಾರಗೈದ ಘಟನೆ ಕೆದಬಾಡಿ ಗ್ರಾಮದ ಕುರಿಕ್ಕಾರ ಎಂಬಲ್ಲಿ ನಡೆದಿದೆ.
ಆರೋಪಿ ಜಯರಾಮ್ ರೈ ಎಂದು ಗುರುತಿಸಲಾಗಿದೆ. ಈತ ತನ್ನ ತಾಯಿಯೊಂದಿಗೆ ವಾಸವಾಗಿದ್ದು, ಜ.12ರಂದು ಎಂದಿನಂತೆ ರಾತ್ರಿ ಮಲಗಿ ಮುಂಜಾನೆ ಮೂರು ಗಂಟೆಯ ವೇಳೆಗೆ ತಾಯಿ ಮಲಗಿದ್ದ ರೂಮಿಗೆ ತೆರಳಿ ಬಲವಂತದಿಂದ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭ ತಾಯಿ ಬೊಬ್ಬೆ ಹಾಕಿದಾಗ ತಾಯಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಯಾರಲ್ಲಾದರೂ ತಿಳಿಸದಲ್ಲಿ ಕೊಂದು ಬಿಡುವುದಾಗಿ ಬೆದರಿಕ್ಕೆ ಹಾಕಿದ್ದಲ್ಲದೇ, ಮರುದಿನ ಜ. 13ರಂದು ಬೆಳಗ್ಗೆ ತಾಯಿ ಎಂದಿನಂತೆ ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಅಲ್ಲಿಗೆ ಬಂದ ಜಯರಾಮ ಬಲವಂತದಿಂದ ಮನೆಯ ಹಾಲ್ ಗೆ ಕರೆದೊಯ್ದು ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವುದು ತಿಳಿದುಬಂದಿದೆ. ಮಗನ ಈ ಕೃತ್ಯದಿಂದ ಅಸ್ವಸ್ಥಗೊಂಡ ತಾಯಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಬಲವಂತವಾಗಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಒಡ್ಡಿರುವ ಮಗನ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳೆ ದೂರು ನೀಡಿದ್ದಾರೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.