ಕರ್ತವ್ಯ ನಿರತ ಟಿ.ಸಿ ಗೆ ಪ್ರಯಾಣಿಕನಿಂದ ಹಲ್ಲೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ಕರ್ತವ್ಯನಿರತ ಕೆಎಸ್ಸಾರ್ಟಿಸಿ ಬಸ್ ಸಂಚಾರ ನಿಯಂತ್ರಣಾಧಿಕಾರಿಗೆ ಪ್ರಯಾಣಿಕನೋರ್ವ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರದಂದು ಸಂಜೆ ನಡೆದಿದೆ.


ಹಲ್ಲೆಗೊಳಗಾದವರನ್ನು ಸಂಚಾರ ನಿಯಂತ್ರಣಾಧಿಕಾರಿ ಸುಬ್ರಹ್ಮಣ್ಯ ಭಟ್ ಎಂದು ಗುರುತಿಸಲಾಗಿದೆ. ಇವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕರ್ತವ್ಯ ನಿರತರಾಗಿದ್ದ ವೇಳೆ ಪ್ರಯಾಣಿಕನೋರ್ವ ಕಾಂಞಂಗಾಡಿಗೆ ಹೋಗುವ ಕೇರಳ ಬಸ್ ನ ಮಾಹಿತಿ ಕೇಳಿದ್ದು, ಅದರಂತೆ ಮಾಹಿತಿ ನೀಡಿದ್ದೆ. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದ ಆತ ನನಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Also Read  ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್

error: Content is protected !!
Scroll to Top