ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡಲ್ಲ…! ➤ ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 14. ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.


ಈ ಕುರಿತು ಸುದ್ದಿಗಾಗರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡು ಬಾರಿ ಲಾಕ್ಡೌನ್ ಮಾಡಿದ್ದರಿಂದಾಗಿ ಜನರಿಗೆ ಆರ್ಥಿಕ ಸಮಸ್ಯೆ ಎದುರಾದ ಹಿನ್ನೆಲೆ, ಕೊರೋನಾ ನಿಯಂತ್ರಣದ ವಿಷಯದಲ್ಲಿ ನಿರ್ಲಕ್ಷ್ಯ ತೋರದೇ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ. ಹೀಗಾಗಿ ಲಾಕ್ ಡೌನ್ ಮಾಡುವ ಉದ್ದೇಶ ಸರಕಾರದ ಮುಂದಿಲ್ಲ ಎಂದರು. ತಜ್ಞರ ಪ್ರಕಾರ ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ ಕೋವಿಡ್ ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಇಳಿಮುಖವಾಗುವ ಸಾಧ್ಯತೆಯಿದ್ದು, ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಜಾಗರೂಕರಾಗಿರಬೇಕು, ಸರಕಾರವು ಕೂಡಾ ಈ ವಿಚಾರದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು.

Also Read  ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ►ವಿಟ್ಲ ಪರಿಸರದಲ್ಲಿ ವನಮಹೋತ್ಸವ ಆಚರಣೆ

 

error: Content is protected !!
Scroll to Top