ಕಡಬ: ಮನೆಯಿಂದ ಹೊರಹೋದ ಯುವತಿ ಹಿಂತಿರುಗದೆ ನಾಪತ್ತೆ ➤ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಕಡಬ, ಜ.14. ಮನೆಯಿಂದ ಹೊರಹೋದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ.

ನಾಪತ್ತೆಯಾದ ಯುವತಿಯನ್ನು ಕೋಡಿಂಬಾಳ ಗ್ರಾಮದ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯಾ(22) ಎಂದು ಗುರುತಿಸಲಾಗಿದೆ. ಬುಧವಾರದಂದು ಮನೆಯಿಂದ ಹೊರಹೋದ ದಿವ್ಯಾ ರಾತ್ರಿಯಾದರೂ ಮನೆಗೆ ಹಿಂತಿರುಗದೆ ಇದ್ದುದರಿಂದ ಸಂಬಂಧಿಕರಲ್ಲಿ ಹಾಗೂ ನೆರೆಕರೆಯವರಲ್ಲಿ ವಿಚಾರಿಸಿ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ತಂದೆ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top