(ನ್ಯೂಸ್ ಕಡಬ) newskadaba.com ನವದೆಹಲಿ, ಜ. 17. ದೇಶದಲ್ಲಿ ಯಾರಿಗೂ ಒತ್ತಾಯಪೂರ್ವಕವಾಗಿ ಕೊರೋನಾ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರಕಾರ ಹೊರಡಿಸಿಲ್ಲ ಎಂದು ಕೆಂದ್ರವು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಜನರ ಮೇಲಿನ ಹಿತಾಸಕ್ತಿಯಿಂದ ಮತ್ತು ಕೊರೋನಾ ಸೋಂಕು ಎಲ್ಲೆಡೆ ಹರಡುವುದನ್ನು ತಡೆಗಟ್ಟಲು ಲಸಿಕೆ ಪಡೆಯುವುದು ಹಾಗೂ ಲಸಿಕೆ ಪ್ರಮಾಣಪತ್ರ ಪಡೆಯಲು ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ. ಆದರೆ ಒತ್ತಾಯದಿಂದ ಯಾರ ಮೇಲೂ ಅದನ್ನು ಹೇರಿಲ್ಲ. ಎಲ್ಲರೂ ಲಸಿಕೆ ಪಡೆದು ಕೋವಿಡ್ ಸೋಂಕಿನ ವಿರುದ್ದ ಹೋರಾಡುವಂತೆ ಸೂಚಿಸಲಾಗಿದೆ. ಆದರೆ ಅವರ ಇಚ್ಛೆಗೆ ವಿರುದ್ದವಾಗಿ ಲಸಿಕೆ ನೀಡಿಲ್ಲ ಎಂದು ಕೇಂದ್ರ ಸ್ಪಷ್ಟ ಪಡಿಸಿದೆ.