(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 17. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಏರಿಕೆ ಕಾಣುತ್ತಿದ್ದು, ಈ ಹಿನ್ನೆಲೆ ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವರ್ಚುವಲ್ ಸಭೆ ನಡೆಯಲಿದೆ.
ಸಂಜೆ ನಾಲ್ಕು ಗಂಟೆಯ ವೇಳೆಗೆ ಸಭೆ ನಡೆಯಲಿದ್ದು, ಸಚಿವರಾದ ಆರ್.ಅಶೋಕ್, ಡಾ. ಕೆ ಸುಧಾಕರ್ ಸೇರಿದಂತೆ ಕೋವಿಡ್ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖಾ ಅಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಕೊರೋನಾ ಮುನ್ನೆಚ್ಚರಿಕಾ ಕ್ರಮವಾಗಿ ವಿಧಿಸಲಾದ ಕಠಿಣ ನಿಯಮಗಳು ಜ. 19ಕ್ಕೆ ಅಂತ್ಯವಾಗಲಿದ್ದು, ವೀಕೆಂಡ್ ಕರ್ಫ್ಯೂ ಸೋಮವಾರ( ಇಂದು) ಬೆಳಗ್ಗೆ ಐದು ಗಂಟೆಗೆ ಮುಕ್ತಾಯವಾಗಿದೆ. ಈ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಹಾಗೂ ಕಠಿಣ ನಿಯಮಗಳನ್ನು ಮುಂದುವರಿಸುವ ಕುರಿತು ಚರ್ಚಿಸಲಾಗುವುದು. ಅಲ್ಲದೇ ಇನ್ನು ಹಲವು ನಿರ್ಬಂಧಗಳನ್ನು ಜಾರಿಗೊಳಿಸುವ ಸಾದ್ಯತೆಯಿದ್ದು, ಒಂದರಿಂದ ಒಂಭತ್ತನೇ ತರಗತಿ ಶಾಲೆಗಳನ್ನು ಬಂದ್ ಮಾಡುವ ಸಾಧ್ಯತೆ ಹೆಚ್ಚಿದೆ.