ಟಿಪ್ಪರ್ – ದ್ವಿಚಕ್ರ ವಾಹನ ನಡುವೆ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.17. ಬೈಕ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಮೃತ ಸವಾರನನ್ನು ನಾವೂರು ನಿವಾಸಿ ಹಮೀದ್ ಕುದುರು ಅವರ ಪುತ್ರ ಮಿಸ್ಬಾಯಿಲ್(19) ಹಾಗೂ ಕುವೆಟ್ಟು ಗ್ರಾಮದ ಗುರುವಾಯನಕೆರೆ ‌ನಿವಾಸಿ ಅಶ್ರಫ್ ಎಂಬವರ ಪುತ್ರ ಅಶ್ಪಾನ್(19) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಟಿಪ್ಪರ್ ಸ್ಕೂಟಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯ ತೀವ್ರತೆಗೆ ಇಬ್ಬರೂ ಸ್ಥಳದ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Scroll to Top