ದ.ಕ ಜಿಲ್ಲೆ: 5ಕ್ಕಿಂತ ಮೇಲ್ಪಟ್ಟ ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರ ಸ್ಥಗಿತಗೊಳಿಸಿ ➤ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ರವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆಯನ್ನು ನೀಡಿದ್ದಾರೆ.


ಸದ್ಯದ ಪರಿಸ್ಥಿತಿಗೆ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ ತೊಂದರೆಯಾಗಲಿದ್ದು, ಈ ಕಾರಣದಿಂದ ಯಾವ ಶಾಲೆಗಳಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚು ಕಂಡು ಬರುತ್ತದೆಯೋ ಆ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದು ಎಂದು ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ಅಭಿಪ್ರಾಯ ವ್ಯಕ್ತಪಡಿಸಿದೆ. ಶಾಲೆಗಳಲ್ಲಿ ಪ್ರತೀದಿನ ಕೋವಿಡ್ ಪಾಸಿಟಿವ್ ಪ್ರಕರಣಗಳ ಕುರಿತಂತೆ ಮಾಹಿತಿ ಪಡೆದು, ಶಿಕ್ಷಣ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಒಂದು ವಾರದ ಬಳಿಕ ಶಾಲಾ ಆಡಳಿತ ಮಂಡಳಿ, ಅಧಿಕಾರಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಹೇಳಿದರು.

Also Read  ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ

 

error: Content is protected !!
Scroll to Top