ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ಸಿಟಿ ರವಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 18. ರಾಜ್ಯದಲ್ಲಿ ಕೊರೋನಾ ಭೀತಿ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಸರಕಾರ ಜಾರಿಗೊಳಿಸಿದ ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ನಂತಹ ನಿಯಮಗಳನ್ನು ಸ್ವತಃ ಬಿಜೆಪಿ ಶಾಸಕ ಸಿಟಿ ರವಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.


ಗೋವಾದ ಪಣಜಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ಲಾಕ್ಡೌನ್ ಗೆ ನನ್ನ ವಿರೋಧವಿದೆ. ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದ್ದು, ಅದೃಷ್ಟವಶಾತ್ ಮೂರನೇ ಅಲೆಯಲ್ಲಿ ಪ್ರಾಣಾಪಾಯ ಕಡಿಮೆಯಿದ್ದು, ಎಫೆಕ್ಟ್ ಕಡಿಮೆಯಿದೆ. ಈಗಾಗಲೇ ಕರ್ಪ್ಯೂ, ಲಾಕ್ ಡೌನ್ ನಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಮತ್ತೆ ಲಾಕ್ಡೌನ್ ಮಾಡಿ ಜನರನ್ನೇಕೆ ಸಂಕಷ್ಟಕ್ಕೆ ತಳ್ಳಬೇಕು? ಇದಕ್ಕೆ ಬದಲಾಗಿ ಕೆಲವು ನಿಯಮಗಳನ್ನು ಜಾರಿಗೊಳಿಸಲಿ ಎಂದು ಸಲಹೆ ನೀಡಿದ್ದಾರೆ.

Also Read  ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರಿಗೆ ರಾಜ್ಯಮಟ್ಟದ ಎಕ್ಸಲೆನ್ಸ್ ಅವಾರ್ಡ್

 

 

error: Content is protected !!
Scroll to Top