2021-22ನೇ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 19. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್-ಮೇ ತಿಂಗಳಲ್ಲಿ ನಡೆಸಲು ತಯಾರಿ ನಡೆದಿದ್ದು, ಇದೀಗ ತಾತ್ಕಾಲಿಕ ವೇಳಾಪಟ್ಟಿಯನ್ನು ಪಿಯು ಬೋರ್ಡ್ ಬಿಡುಗಡೆ ಮಾಡಿದೆ. ಇದರ ಪ್ರಕಾರ ಏಪ್ರಿಲ್ 16 ರಿಂದ ಮೇ 4ರ ತನಕ ಪರೀಕ್ಷೆ ನಡೆಯಲಿದೆ.

ಇದಕ್ಕೆ ಸಂಬಂಧಿಸಿ ಪೋಷಕರು ಅಥವಾ ವಿದ್ಯಾರ್ಥಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಫೆಬ್ರವರಿ 1ರವರೆಗೆ ಅವಕಾಶ ಕಲ್ಪಿಸಲಾಗಿದೆ. 2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಮಾರ್ಚ್ 14 ರಿಂದ 25ರವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.

Also Read  ತರಬೇತಿ ಜಾಗೃತಿಗೆ ಇವಿಎಂ, ವಿವಿಪ್ಯಾಟ್ ಬಳಕೆ

 

 

 

error: Content is protected !!
Scroll to Top