ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!



(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 19. ವ್ಯಕ್ತಿಯೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.







ಆತ್ಮಹತ್ಯೆ ಮಾಡಿಕೊಂಡವರನ್ನು ಕಾರಾಜೆ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ರಾತ್ರಿ ಸುಮಾರು ಗಂಟೆ ಹನ್ನೊಂದರ ವೇಳೆಗೆ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ನ್ನು ಇಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿದ್ದ ಮೊಬೈಲ್ ಆಧಾರದಲ್ಲಿ ಮೃತರು ಜಲೀಲ್ ಕಾರಾಜೆ ಎಂದು ಗುರುತಿಸಲಾಗಿದೆ. ತಡರಾತ್ರಿವರೆಗೂ ನದಿಯಲ್ಲಿ ಹುಡುಕಾಡಿದಾಗ ವ್ಯಕ್ತಿ ಪತ್ತೆಯಾಗಿರಲಿಲ್ಲ‌. ಇಂದು ಮುಂಜಾನೆಯಿಂದ ಸ್ಥಳೀಯ ಈಜುಗಾರರು ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top