ಪಂಜ: ಬೈಕ್- ಸ್ಕೂಟರ್ ಢಿಕ್ಕಿ ➤ ಸವಾರರಿಗೆ ಗಾಯ..!



(ನ್ಯೂಸ್ ಕಡಬ) newskadaba.com ಸುಳ್ಯ, ಜ. 19. ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಪಂಜದಲ್ಲಿ ನಡೆದಿದೆ.








ಗಾಯಗೊಂಡವರನ್ನು ಶಶಿಧರ್ ಹಾಗೂ ಪುನೀತ್ ಎಂದು ಗುರುತಿಸಲಾಗಿದೆ. ಪಂಜ ಪೇಟೆ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಸುಳ್ಯ ಕಡೆಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಶಶಿಧರ್ ಎಂಬವರ ಕಾಲಿಗೆ ಗಾಯವಾಗಿದ್ದು, ಸ್ಕೂಟರ್ ಸವಾರ ಪುನೀತ್ ರವರ ಕೈಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top