ನಾಪತ್ತೆಯಾಗಿದ್ದ ನಟಿ ರೈಮಾ ಶಿಮು ಮೃತದೇಹ ಗೋಣಿಚೀಲದಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಢಾಕಾ, ಜ. 19. ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶ ನಟಿ ರೈಮಾ ಶಿಮು ಅವರ ಮೃತದೇಹವು ಹಜರತ್ ಪುರ ಸಮೀಪದ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.


ಶಿಮು ನಾಪತ್ತೆಯಾದ ಹಿನ್ನೆಲೆ ಸಂಬಂಧಿಕರು ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಠಾಣಾ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಶವ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರ ರೈಮಾ ಪತಿ ಹಾಗೂ ಕಾರು ಚಾಲಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.

 

 

Scroll to Top