ಬಿಸಿಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ…! ➤ ಯುವತೇಜಸ್ಸು ತಂಡದಿಂದ ಬದುಕಿಸಲು ಯತ್ನ- ಆಸ್ಪತ್ರೆಗೆ ಸಾಗಿಸುವ ವೇಳೆ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 19. ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.


ಬಿಸಿಲೆಘಾಟ್ ನ ಚೌಡೇಶ್ವರಿ ಅಮ್ಮನವರ ಗುಡಿಯಿಂದ ಸುಮಾರು ನೂರು ಮೀಟರ್ ಇಳಿಜಾರು ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೋರ್ವರು ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಸುಬ್ರಹ್ಮಣ್ಯದ ಯುವತೇಜಸ್ಸು ಟ್ರಸ್ಟ್ ಗೆ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಟ್ರಸ್ಟ್ ನ ಸದಸ್ಯರು ಅವರನ್ನು ಸುಬ್ರಹ್ಮಣ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಸುಳ್ಯದ ಆಸ್ಪತ್ರೆಗೆ ಕರೆದೊಯ್ಯುವ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಮೃತ ವ್ಯಕ್ತಿಯ ಬಾಯಲ್ಲಿ ನೊರೆ ಬರುತ್ತಿದ್ದು, ಅಲ್ಲದೇ ಕೀಟನಾಶಕ ವಾಸನೆ ಬರುತ್ತಿರುವುದರಿಂದ ಮೇಲ್ನೋಟಕ್ಕೆ ಕೀಟನಾಶಕ ಕುಡಿದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆಯ ಕುರಿತು ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಸಂಪುಟ ವಿಸ್ತರಣೆಯ ಕುರಿತು ಅಸಮಾಧಾನ ಇದ್ದವರು ವರಿಷ್ಠರಿಗೆ ದೂರು ನೀಡಲಿ ➤ ಸಿಎಂ ಬಿಎಸ್.ವೈ

 

 

error: Content is protected !!
Scroll to Top