ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದ ಟೋಯಿಂಗ್ ವಾಹನ..! ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 20. ಟೋಯಿಂಗ್ ವಾಹನ ಹಾಗೂ ಸ್ವಿಫ್ಟ್ ಕಾರಿನ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಕನಕಮಜಲು ಎಂಬಲ್ಲಿ ನಡೆದಿದೆ.

ಅಪಘಾತಕ್ಕೀಡಾದ ಕಾರನ್ನು ಮಂಗಳೂರಿನಿಂದ ಮೈಸೂರಿಗೆ ಒಯ್ಯುತ್ತಿದ್ದ ಟೋಯಿಂಗ್ ವಾಹನವು ಕೋಡಿ ತಿರುವಿಗೆ ತಲುಪುತ್ತಿದ್ದಂತೆಯೇ ವಾಹನದ ಬ್ರೇಕ್ ವೈಫಲ್ಯಗೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

error: Content is protected !!

Join the Group

Join WhatsApp Group