ಉಡುಪಿ ಸ್ಕಾರ್ಫ್ ವಿವಾದ ➤ ಕಾಲೇಜ್ ಗೇಟ್ ಮುಂಬಾಗ ಬಿತ್ತಿ ಪತ್ರ ಪ್ರದರ್ಶಿಸಿ ನಿಂತ ಸಂತ್ರಸ್ತ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಉಡುಪಿ, ಜ. 20. ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕೆ ತರಗತಿಯಿಂದ ಹೊರ ಹಾಕಲ್ಪಟ್ಟ ಘಟನೆಗೆ ಇನ್ನೂ ಅಂತ್ಯಕಂಡಿಲ್ಲ.

ಇದರ ಭಾಗವಾಗಿ ಇಂದು ವಿದ್ಯಾರ್ಥಿಗಳು ನಮಗೆ ನ್ಯಾಯ ಒದಗಿಸಿ ಎಂದು ಕಾಲೇಜು ಗೇಟ್ ಮುಂಭಾಗ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ಅಧಿಕಾರಿಗಳು ಗಮನಹರಿಸದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ, ನಮಗೆ ತರಗತಿಗಳು ಸಿಗುತ್ತಿಲ್ಲ, ನಮ್ಮ ಸಂವಿಧಾನಾತ್ಮಕ ಹಕ್ಕನ್ನು ಕಸಿದಿಟ್ಟು ಮಾನಸಿಕವಾಗಿ ತೊಂದರೆ ಕೊಡುತ್ತಿದ್ದಾರೆಯೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Also Read  ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಕಾರು ಚಾಲಕ ನಿಧನ

 

 

error: Content is protected !!
Scroll to Top