(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ. 21. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಮದುಮಗ ಸೇರಿದಂತೆ ಐವರು ಪ್ರಯಾಣಿಸುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯ ತೀವ್ರತೆಗೆ ತಕ್ಷಣವೇ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.