ಕೊರೋನಾ ಸೋಂಕಿನ ಭೀತಿ ➤ ಬೆಂಕಿ ಹಚ್ಚಿ ಮಹಿಳೆ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 21. ಅನಾರೋಗ್ಯ ಪೀಡಿತ ಮಹಿಳೆಯೋರ್ವರು ಕೊರೋನಾ ಸೋಂಕಿಗೆ ಭಯಪಟ್ಟು ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ನಡೆದಿದೆ.

 

 


ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಹೊಸ್ಮಾರು ನಿವಾಸಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಕೊರೋನಾ ಸೋಂಕು ದೃಡಪಟ್ಟಿಲ್ಲವಾದರೂ ಸೋಂಕು ತಗಲುವ ಭೀತಿಯಿಂದ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

Scroll to Top