50 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು ➤ ಬಿಜೆಪಿ ಶಾಸಕನ ಪುತ್ರ ಸಹಿತ 7 ಮಂದಿ ದುರ್ಮರಣ..!

(ನ್ಯೂಸ್ ಕಡಬ) newskadaba.com ವಾರ್ಧಾ, ಜ. 25. ಕಾರೊಂದು ಸೇತುವೆಯಿಂದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಬಿಜೆಪಿ ಶಾಸಕನ ಪುತ್ರ ಸಹಿತ 7 ಮಂದಿ ವ್ಯದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಸೆಲ್ಸುರಾ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ.


ಮೃತಪಟ್ಟವರನ್ನು ತಿರೊಡಾ ಕ್ಷೇತ್ರದ ಬಿಜೆಪಿ ಶಾಸಕ ವಿಜಯ್ ರಹಂಗ್ ಡೇಲ್ ಅವರ ಪುತ್ರ ಆವಿಷ್ಕಾರ್ ಆತನ ಸ್ನೇಹಿತರಾದ ನೀರಜ್ ಚೌಹಾನ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್ ಹಾಗೂ ಪವನ್ ಎಂದು ಗುರುತಿಸಲಾಗಿದೆ. ಸಾವಂಗಿಯ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಸೋಮವಾರ ರಾತ್ರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆ ಮೇಲಿಂದ 50 ಅಡಿ ಆಳಕ್ಕೆ ಬಿದ್ದಿದ್ದು, ಪರಿಣಾಮ ಏಳು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 

Scroll to Top