(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 25. ರಾಜ್ಯದ ಪಿಎಸ್ಐ ಪರೀಕ್ಷಾ ಫಲಿತಾಂಶದ ಬೆನ್ನಲ್ಲೇ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಆರೋಪ ಕೇಳಿಬಂದಿದ್ದು, ಅಲ್ಲದೇ ಪಿಎಸ್ಐ ನೇಮಕಾತಿ ಸಮಿತಿ ಅಧ್ಯಕ್ಷರಾಗಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಈ ಬಗ್ಗೆ ಹಲವು ಅಭ್ಯರ್ಥಿಗಳು ದೂರು ನೀಡಿದ್ದಾರೆ.
ಈ ಕುರಿತು ಬೆಂಗಳೂರು ನಗರ ಸುಬ್ರಹ್ಮಣ್ಯಪುರ ಠಾಣಾ ಹೆಡ್ ಕಾನ್ಸ್ಟೇಬಲ್ ಡಿ.ಆರ್. ಮೋಹನ್ ಕುಮಾರ್ ಅವರು ದೂರು ನೀಡಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ -1ರ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನ ಮಾಡಿ ಅಂಕಗಳ ಮರುಎಣಿಕೆ ಮಾಡುವ ಮೂಲಕ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಪತ್ರಿಕೆ -1ರಲ್ಲಿ ಹೆಚ್ಚು ಅಂಕಗಳಿಸಲು ಸಾಧ್ಯವಾಗಿಲ್ಲ. ಬ್ಲೂಟುತ್ ಬಳಸಿ ಪರೀಕ್ಷೆ ಬರೆದಿರುವ ಸಂಶಯವಿದೆ ಎಂದೂ ಕೆಲವರು ದೂರಿನಲ್ಲಿ ತಿಳಿಸಿದ್ದಾರೆ.